(ನ್ಯೂಸ್ ಕಡಬ) newskadaba.com ಮಂಗಳೂರು, ಆ.30. ಜೈಲಿನಲ್ಲಿದ್ದ ವಿಚಾರಣಾಧೀನ ಖೈದಿಯೊಬ್ಬರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ.
ಮೃತರನ್ನು ತನ್ನ ಮಗಳ ಮೇಲೆ ಅತ್ಯಾಚಾರ ಮಾಡಿದ ಪ್ರಕರಣದ ವಿಚಾರಣಾಧೀನ ಖೈದಿ ಸುಳ್ಯ ನಿವಾಸಿ ಶಿವಪ್ಪ (47) ಎಂದು ಗುರುತಿಸಲಾಗಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಶಿವಪ್ಪರನ್ನು ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.