ನಾಳೆ ಬೆಳಗ್ಗೆ 10 ಕ್ಕೆ ದೇಶವನ್ನುದ್ದೇಶಿಸಿ ಮೋದಿ ಭಾಷಣ

ಹೊಸದಿಲ್ಲಿ, ಎ.13: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಬೆಳಗ್ಗೆ 10 ಗಂಟೆಗೆ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದು, ಏಪ್ರಿಲ್ 15 ರಿಂದ ಎರಡನೇ ಹಂತದಲ್ಲಿ ಲಾಕ್‌ಡೌನ್ ಮುಂದುವರಿಸುವ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ.

ಈಗಾಗಲೇ ಲಾಕ್ಡೌನ್ ಮುಂದುವರೆಸುವ ಸುಳಿವು ನೀಡಲಾಗಿದೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಮನವಿಗೆ ಸ್ಪಂದಿಸಿ ಲಾಕ್ ಡೌನ್ ಅವಧಿಯನ್ನು ವಿಸ್ತರಣೆ ಮಾಡಲು ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ಕೃಷಿ ಚಟುವಟಿಕೆ, ಮೀನುಗಾರಿಕೆಗೆ ನಿರ್ಬಂಧ ಸಡಿಲಗೊಳಿಸಿದ್ದು, ಇದೇ ವೇಳೆ ಕೆಲವು ಕೈಗಾರಿಕೆ, ಜವಳಿ ವಲಯಗಳಿಗೂ ಸ್ವಲ್ಪ ವಿನಾಯಿತಿ ನೀಡಬಹುದು ಎಂದು ಹೇಳಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಹಲವು ನಿಬಂಧನೆ, ಷರತ್ತಿಗೆ ಒಳಪಟ್ಟು ಕೆಲವು ವಲಯಕ್ಕೆ ಅವಕಾಶ ನೀಡಬಹುದು. ಈಗಾಗಲೇ ಜಾರಿಯಲ್ಲಿರುವ 21 ದಿನಗಳ ಲಾಕ್ಡೌನ್ ಅವಧಿ ಏಪ್ರಿಲ್ 14ಕ್ಕೆ ಮುಕ್ತಾಯವಾಗಲಿದ್ದು ಇಂದು ಸಂಜೆ ಮೋದಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಿ ಲಾಕ್ ಡೌನ್ ಮುಂದುವರಿಸುವ ಬಗ್ಗೆ ಘೋಷಣೆ ಮಾಡಬಹುದಾಗಿದೆ ಎಂದು ಹೇಳಲಾಗಿದೆ.

Also Read  ಕಡಬ: ಮಸಾಜ್ ಪಾರ್ಲರ್ ನಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ➤ ಆರೋಪಿ ಪೊಲೀಸ್ ವಶಕ್ಕೆ

error: Content is protected !!
Scroll to Top