Breaking news ಕೊರೋನಗೆ ಮತ್ತೊಂದು ಬಲಿ, ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10 ಕ್ಕೆ ಏರಿಕೆ

ಬೆಂಗಳೂರು, ಎ.14: ಕೊರೋನ ವೈರಸ್‌ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದ್ದು, ಇದುವರೆಗೆ ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ. ಕೊರೋನ ಸೋಂಕಿನಿಂದ ಬಳಲುತ್ತಿದ್ದ ಬೆಂಗಳೂರಿನ ವೃದ್ದ ಸಾವನ್ನಪ್ಪಿದ್ದಾರೆ. ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನೂ, ರಾಜ್ಯದಲ್ಲಿ ಇಂದು ಮತ್ತೆ ಕೊರೋನ ವೈರಸ್ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು ಮತ್ತೆ 13 ಜನರಿಗೆ ಕೊರೋನ ವೈರಸ್ ಸೋಂಕು ತಗುಲಿದ್ದು ಪತ್ತೆಯಾಗುವ ಮೂಲಕ, ಸೋಂಕಿತರ ಸಂಖ್ಯೆ 258ಕ್ಕೆ ಏರಿಕೆಯಾಗಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವಂತ ಹೆಲ್ತ್ ಬುಲೆಟಿನ್ ನಿಂದಾಗಿ ತಿಳಿದು ಬಂದಿದೆ.

Also Read  ಹೋಟೆಲ್‌ಗಳಲ್ಲಿ ಸ್ಮೋಕಿಂಗ್ ಝೋನ್‌ ಕಡ್ಡಾಯ ➤ ಬಿಬಿಎಂಪಿ ಮಹತ್ವದ ಆದೇಶ                            

ಬಾಗಲಕೋಟೆಯಲ್ಲಿ ಮೂವರಿಗೆ, ಚಿಕ್ಕಬಳ್ಳಾಪುರದಲ್ಲಿ ಒಬ್ಬರಿಗೆ, ಬೆಂಗಳೂರು ನಗರದಲ್ಲಿ ಮೂವರಿಗೆ, ಕಲಬುರ್ಗಿಯಲ್ಲಿ ಮೂವರಿಗೆ, ವಿಜಯಪುರದಲ್ಲಿ ಒಬ್ಬರಿಗೆ, ಬೆಳಗಾವಿಯಲ್ಲಿ ಒಬ್ಬರಿಗೆ ಮತ್ತು ಉತ್ತರಕನ್ನಡದಲ್ಲಿ ಒಬ್ಬರಿಗೆ ಕೊರೋನ ವೈರಸ್ ಸೋಂಕು ತಗುಲಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವಂತ ಹೆಲ್ತ್ ಬುಲೆಟಿನ್ ನಿಂದಾಗಿ ತಿಳಿದು ಬಂದಿದೆ. ಹೀಗಾಗಿ ಇಂದು 13 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 260ಕ್ಕೆ ಏರಿಕೆಯಾಗಿದೆ. ಇನ್ನೂ ಕೊರೊನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಈವೆರೆಗೆ 10 ಜನರು ಸಾವನ್ನಪ್ಪಿದ್ದಾರೆ.

error: Content is protected !!
Scroll to Top