ಮಂಗಳೂರು, ಎಪ್ರಿಲ್ 18. ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರಕಾರದಿಂದ ರೂ. 2000 ನೆರವು ಘೋಷಿಸಲಾಗಿದ್ದು, ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 6122 ಕಟ್ಟಡ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಮೊದಲ ಹಂತದಲ್ಲಿ ಜಮಾ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ಕಾರ್ಮಿಕ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಕೋರೋನಾ ಹಿನ್ನೆಲೆಯಲ್ಲಿ ಕೆಲಸವಿಲ್ಲದೇ ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರಿಗೆ ನೆರವಾಗಲು ಕಾರ್ಮಿಕ ನಿಧಿಯಿಂದ ಈ ಮೊತ್ತ ನೀಡಲಾಗುತ್ತಿದೆ. ಈಗಾಗಲೇ ಮೊದಲ ಹಂತದಲ್ಲಿ 6122 ಕಟ್ಟಡ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆ. ಉಳಿದವರಿಗೆ ಶೀಘ್ರದಲ್ಲೇ ಜಮಾ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.