ಬೆಂಗಳೂರು, ಎ.22: ರಾಜ್ಯದಲ್ಲಿ ಇಂದು ಹೊಸದಾಗಿ 9 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 427ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಕಲಬುರಗಿಯ ಐವರು, ಮೈಸೂರು ಹಾಗೂ ಬೆಂಗಳೂರಿನ ತಲಾ ಇಬ್ಬರಿಗೆ ಸೋಂಕು ತಗುಲಿದೆ ಎಂದು ಇಲಾಖೆ ತಿಳಿಸಿದೆ.