ಕಡಬ ಪರಿಸರದಲ್ಲಿ ಗುಡುಗು ಸಹಿತ ಭಾರೀ ಗಾಳಿ ಮಳೆ ➤ ಮೀನಾಡಿಯಲ್ಲಿ ಮನೆಗೆ ಸಿಡಿಲು ಬಡಿತ, ಇಚಿಲಂಪಾಡಿಯಲ್ಲಿ ಮನೆಗೆ ಹಾನಿ

(ನ್ಯೂಸ್ ಕಡಬ) newskadaba.com ಕಡಬ, ಎ.26. ಭಾನುವಾರ ಸಂಜೆ ಕಡಬ ಪರಿಸರದಲ್ಲಿ ಗುಡುಗು ಸಹಿತ ಭಾರೀ ಗಾಳಿ ಮಳೆಯಾಗಿದ್ದು, ಕೆಲವೆಡೆ ಅಲ್ಪ ಪ್ರಮಾಣದಲ್ಲಿ ಹಾನಿಯಾಗಿವೆ.

ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಮೀನಾಡಿ ನಿವಾಸಿ ಬಾಳಪ್ಪ ಗೌಡ ಎಂಬವರ ಮನೆಗೆ ಸಿಡಿಲು ಬಡಿದಿದೆ. ಬೆಂಕಿಯ ಉಂಡೆಯೊಂದು‌ ಮನೆಗೆ ಅಪ್ಪಳಿಸಿದ್ದು, ಮನೆಯ ಒಂದು ಪಾರ್ಶ್ವ ಹಾನಿಗೀಡಾಗಿದೆ. ಮನೆಯಲ್ಲಿದ್ದವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಇನ್ನೊಂದೆಡೆ ಭಾನುವಾರ ಸಂಜೆ‌ ಸುರಿದ ಮಳೆಗೆ ಇಚಿಲಂಪಾಡಿಯ ಪಾದೆ‌ ನಿವಾಸಿ ಸಾಂತಪ್ಪ ಗೌಡ ಎಂಬವರ ಮನೆಗೆ ಹಾನಿಯಾಗಿದೆ. ಘಟನೆಯಲ್ಲಿ ಸಾಂತಪ್ಪ ಗೌಡರ ಪತ್ನಿ ನಂದ‌ಕುಮಾರಿ ಎಂಬವರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಪಿ. ವರ್ಗೀಸ್, ತಾಲೂಕು ಪಂಚಾಯತ್ ಸದಸ್ಯೆ ಕೆ.ಟಿ. ವಲ್ಸಮ್ಮ‌ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಭೇಟಿ ನೀಡಿದ್ದಾರೆ.

ಆಲಂಕಾರು ಆತೂರು ಪರಿಸರದಲ್ಲಿ ಬೀಸಿದ ಭಾರೀ ಗಾಳಿಗೆ ಗೋಳಿತ್ತಡಿ ಸಮೀಪ ಬೃಹತ್ ಗಾತ್ರದ ಮರವೊಂದು ರಸ್ತೆಗುರುಳಿದ ಪರಿಣಾಮ ಕೆಲಕಾಲ ರಸ್ತೆ ತಡೆ ಉಂಟಾಗಿತ್ತು. ಬಳಿಕ ಕಡಬ ಪೊಲೀಸರು ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿದ್ದಾರೆ. ಮರ ಬಿದ್ದುದರಿಂದ ವಿದ್ಯುತ್ ತಂತಿಗೆ ಹಾನಿಯಾಗಿದೆ.

error: Content is protected !!

Join the Group

Join WhatsApp Group