(ನ್ಯೂಸ್ ಕಡಬ) newskadaba.com ಹಾಸನ, ಆ.31. ಹುಚ್ಚು ನಾಯಿ ದಾಳಿಯಿಂದಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹಾಸನ ಬೇಲೂರು ಪಟ್ಟಣದ ಬಡಾವಣೆಗಳಲ್ಲಿ ಬುಧವಾರ ರಾತ್ರಿ ನಡೆದಿದೆ.
ಸಿಕ್ಕಸಿಕ್ಕವರ ಮೇಲೆ ಹುಚ್ಚುನಾಯಿ ದಾಳಿ ಮಾಡಿದ ಪರಿಣಾಮ ವೃದ್ಧರು, ಮಕ್ಕಳು ಸೇರಿ 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳು
ಬೇಲೂರು ಮತ್ತು ಹಾಸನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಸ್ಥಳೀಯರು ಮತ್ತು ಪುರಸಭೆ ಸಿಬ್ಬಂದಿ ಸೇರಿ ಬೈಕ್ ಗಳ ಮೂಲಕ ನಾಯಿ ಹಿಡಿಯಲು ಪ್ರಯತ್ನಿಸಿದರೂ ಪ್ರಯೋಜನವಾಗದೆ ಈವರಗೆ ನಾಯಿಯನ್ನು ಹಿಡಿಯಲು ಸಾಧ್ಯವಾಗಿಲ್ಲ. ಹೀಗಾಗಿ ಪಟ್ಟಣ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ.












