ದ.ಕ. ಜಿಲ್ಲೆಯಲ್ಲಿ ತಂಬಾಕು ಪದಾರ್ಥ ಮಾರಾಟ, ಸೇವನೆ ನಿಷೇಧ

ಮಂಗಳೂರು, ಎ.29: ಕೊರೋನ ಸೋಂಕು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಪಾನ್ ಮಸಾಲ, ಜರ್ದಾ, ಚೈನಿ ಖೈನಿ ಇತ್ಯಾದಿ ಜಗಿಯುವ ತಂಬಾಕು ಪದಾರ್ಥಗಳನ್ನು ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಜೊತೆಗೆ ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ, ನ್ಯುಮೋನಿಯ ಮತ್ತು ಕೊರೋನ ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡಲು ಕಾರಣವಾಗಬಹುದು.

ಬೀಡಿ, ಸಿಗರೇಟ್ ಸೇದುವುದರಿಂದ ಕೈಯಿಂದ ಬಾಯಿಯ ಮೂಲಕ ವೈರಸ್‌ಗಳು ಮಾನವನ ದೇಹವನ್ನು ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಹಾಗೂ ದೇಹದ ಇತರೆ ಭಾಗಗಳಿಗೆ ಸೋಂಕು ಹರಡಿ ಶ್ವಾಸಕೋಶ, ಹೃದಯ ಸಂಬಂಧಿತ ಕಾಯಿಲೆಗಳು ಬರಬಹುದು.

ಸಾರ್ವಜನಿಕ ಹಿತಾದೃಷ್ಟಿಯಿಂದ ದ.ಕ. ಜಿಲ್ಲೆಯಾದ್ಯಂತ ಮುಂದಿನ ಆದೇಶದವರೆಗೂ ಪಾನ್ ಮಸಾಲ, ಜರ್ದಾ, ಖೈನಿ ಮುಂತಾದ ಜಗಿಯುವ ತಂಬಾಕು ಉತ್ಪನ್ನಗಳನ್ನು ಅಂಗಡಿಗಳಲ್ಲಿ ಮಾರಾಟ ಮಾಡುವುದು ಮತ್ತು ಸಾರ್ವಜನಿಕರು ಬಳಸುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ಉಲ್ಲಂಘನೆಯಾದಲ್ಲಿ ಸಾಂಕ್ರಾಮಿಕ ರೋಗಗಳ ಕಾಯ್ದೆ-1897, ವಿಪತ್ತು ನಿರ್ವಹಣಾ ಕಾಯ್ದೆ-2005, ಐಪಿಸಿ-188,268,269 ಮತ್ತು 270 ಅಡಿಯಲ್ಲಿ ಪ್ರಕರಣ ದಾಖಲಿಸಿ ಸಂಬಂಧಿಸಿದವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು, ಹಾಗೂ ಅಧ್ಯಕ್ಷರು, ಜಿಲ್ಲಾ ತಂಬಾಕು ನಿಯಂತ್ರಣ ಸಮನ್ವಯ ಸಮಿತಿ ದ.ಕ. ಇವರ ಪ್ರಕಟನೆ ತಿಳಿಸಿದೆ.

error: Content is protected !!

Join the Group

Join WhatsApp Group