ದ.ಕ.ದಲ್ಲಿ ನಾಳೆಯಿಂದ ಬೆಳಿಗ್ಗೆ 7 ರಿಂದ ರಾತ್ರಿ 7ರ ವರೆಗೆ ಲಾಕ್‌ಡೌನ್ ಸಡಿಲಿಕೆ ➤ ಏನೆಲ್ಲಾ ಇರುತ್ತೆ ಎಂದು ತಿಳಿಯಬೇಕೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.03. ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್‌ಡೌನ್ ನ್ನು ಬೆಳಿಗ್ಗೆ 7 ರಿಂದ ರಾತ್ರಿ 7ರವರೆಗೆ ಸಡಿಲಿಸಿ ಜಿಲ್ಲಾಧಿಕಾರಿ ಸಿಂಧೂ.ಬಿ‌.ರೂಪೇಶ್ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ಆಟೋ ರಿಕ್ಷಾ, ಕ್ಯಾಬ್ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, ಆಟೋ ಮತ್ತು ಕ್ಯಾಬ್ ಗಳಲ್ಲಿ ಚಾಲಕ ಮತ್ತು ಇಬ್ಬರು ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಖಾಸಗಿ ವಾಹನಗಳಾದ ಬೈಕ್ ಮತ್ತು ಕಾರುಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಬೈಕಿನಲ್ಲಿ ಒಬ್ಬರಿಗಷ್ಟೇ ಪ್ರಯಾಣಿಸಲು ಅನುಮತಿ ನೀಡಲಾಗಿದೆ. ಸ್ಥಳೀಯ ಅಂಗಡಿಗಳು, ವಸತಿ ಸಂಕೀರ್ಣಗಳ ಶಾಪ್, ಸಣ್ಣಪುಟ್ಟ ಶಾಪ್ ತೆರೆಯಲು ಅನುಮತಿ ಕಲ್ಪಿಸಲಾಗಿದೆ. ಖಾಸಗಿ ಸಂಸ್ಥೆ ಮತ್ತು ಕಚೇರಿಗಳಲ್ಲಿ 33% ಸಿಬ್ಬಂದಿ ಬಳಸಿ ಕೆಲಸಕ್ಕೆ ಅನುಮತಿ ನೀಡಲಾಗಿದೆ. ಇ-ಕಾಮರ್ಸ್ ಸಂಸ್ಥೆಗಳಿಗೆ ಅವಕಾಶ ನೀಡಲಾಗಿದ್ದು, ಅಗತ್ಯ ಕಟ್ಟಡ ಕಾಮಗಾರಿ ನಡೆಸಲು ಅವಕಾಶ (ಹೊರಗಿನಿಂದ ಕಾರ್ಮಿಕರು ಬರುವಂತಿಲ್ಲ) ನೀಡಲಾಗಿದೆ. ಮಾರುಕಟ್ಟೆ ಮತ್ತು ಮಾರುಕಟ್ಟೆ ಸಂಕೀರ್ಣಗಳಲ್ಲಿ ಅಗತ್ಯ ವಸ್ತುಗಳ ಶಾಪ್ ತೆರೆಯಲು ಅನುಮತಿಯಿದೆ.

Also Read  ಆಲಂಕಾರು : ಶಾಲಾ ಶತಮಾನೋತ್ಸವಕ್ಕೆ ಹಿರಿಯ ವಿದ್ಯಾರ್ಥಿಗಳಿಂದ ಧನ ಸಹಾಯ

ಹೊಟೇಲ್ ಬಾರ್, ರೆಸ್ಟೋರೆಂಟ್, ಮಾಲ್, ಸಿನಿಮಾ ಮಂದಿರ, ಜಿಮ್, ಕ್ರೀಡಾ ಸಂಕೀರ್ಣ, ಕ್ಲಬ್, ಸ್ವಿಮ್ಮಿಂಗ್ ಫೂಲ್, ಪಾರ್ಕ್, ಸೆಲೂನ್, ಸ್ಪಾ, ಬ್ಯೂಟಿ ಪಾರ್ಲರ್, ಟೆಕ್ಸ್ ಟೈಲ್ಸ್ ಮತ್ತು ಬಟ್ಟೆ ಅಂಗಡಿಗಳು ಬಂದ್ ಆಗಿರುತ್ತದೆ. ಮಾತ್ರವಲ್ಲ, ಸಾಮಾಜಿಕ ಧಾರ್ಮಿಕ, ಸಾಂಸ್ಕೃತಿಕ ಸೇರಿ ಜನ ಸೇರುವ ಎಲ್ಲಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ದ.ಕ ಜಿಲ್ಲೆಯಲ್ಲಿ ರಾತ್ರಿ 7 ರಿಂದ ಬೆಳಿಗ್ಗೆ 7ರ ವರೆಗೆ ಎಲ್ಲಾ ರೀತಿಯ ಸಂಚಾರ, ಸೇವೆಯನ್ನು ಬಂದ್ ಮಾಡಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Also Read  ಮೂಲಭೂತ ಸೌಕರ್ಯ ಒದಗಿಸದೆ ತೆರಿಗೆ ಏರಿಸಿ ಸಾರ್ವಜನಿಕರಿಗೆ ತೊಂದರೆ ➤ ಕಡಬ ಪಟ್ಟಣ ಪಂಚಾಯಿತಿ ವಿರುದ್ಧ ಕಡಬದಲ್ಲಿ ಪ್ರತಿಭಟನೆ

error: Content is protected !!
Scroll to Top