ಸುಳ್ಯ: ಆಸ್ಪತ್ರೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಆಂಬ್ಯುಲೆನ್ಸ್ ಪಲ್ಟಿ ➤ ಮತ್ತೆ ಮೂವರು ಆಸ್ಪತ್ರೆಗೆ



(ನ್ಯೂಸ್ ಕಡಬ) newskadaba.com ಸುಳ್ಯ, ಮೇ.09. ವಿಷ ಸೇವಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದು ಗುಣಮುಖರಾದ ವ್ಯಕ್ತಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ರಾತ್ರಿ ಸುಳ್ಯದಲ್ಲಿ ನಡೆದಿದೆ.





ಕೊಡಗು ಶನಿವಾರಸಂತೆ ನಿವಾಸಿಯೋರ್ವರು ನಾಲ್ಕು ದಿನಗಳ ಹಿಂದೆ ವಿಷ ಸೇವಿಸಿದ್ದು, ಅವರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಶನಿವಾರದಂದು ಅಂಬ್ಯುಲೆನ್ಸ್ ನಲ್ಲಿ ಮಡಿಕೇರಿಗೆ ತೆರಳುತ್ತಿದ್ದ ವೇಳೆ ಸುಳ್ಯ ಹಳೆಗೇಟು ಬಳಿಯ ತಿರುವಿನಲ್ಲಿ ಅಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಕಾರ್ತಿಕ್, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಸುರೇಶ್, ಹಾಗೂ ಅವರ ಪುತ್ರ ಗೌತಮ್ ಗಾಯಗೊಂಡಿದ್ದು, ಗಾಯಾಳು ಚಾಲಕನನ್ನು ಮಂಗಳೂರು ಆಸ್ಪತ್ರೆಗೆ ಹಾಗೂ ಉಳಿದವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.






error: Content is protected !!
Scroll to Top