(ನ್ಯೂಸ್ ಕಡಬ) newskadaba.com ಹೊನ್ನಾಳಿ, ಸೆ.01. ಮಾಜಿ ಮುಖ್ಯಮಂತ್ರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪುತ್ರ ಶಾಸಕ ರಾಘವೇಂದ್ರ ಪ್ರಯಾಣಿಸುತ್ತಿದ್ದ ಕಾರು ಬೈಕೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊನ್ನಾಳಿ ತಾಲೂಕಿನ ಮಾದಾಪುರ ಕ್ರಾಸ್ ಬಳಿ ಗುರುವಾರ ರಾತ್ರಿ ನಡೆದಿದೆ.
ಶಾಸಕ ರಾಘವೇಂದ್ರ ಅವರು ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದಾಗ ಅವರ ಕಾರು ಎದುರಿನಿಂದ ತೆರಳುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದ್ದರಿಂದ ಬೈಕ್ ಸವಾರ ಸ್ಥಳೀಯ ನಿವಾಸಿ ಸುರೇಶ್(24) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ಸ್ಥಳೀಯರು ರಾಘವೇಂದ್ರ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ನ್ಯಾಮತಿ ಠಾಣಾ ಪೊಲೀಸರು ಸ್ಥಳೀಯರನ್ನು ಸಾಮಾಧಾನಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ದಾವಣಗೆರೆಯ ನ್ಯಾಮತಿ ಪ್ರಕರಣ ದಾಖಲಾಗಿದೆ.