(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮೇ.15. ಗ್ಯಾಸ್ ಸಾಗಾಟದ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಶುಕ್ರವಾರ ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ 75ರ ಗುಂಡ್ಯ ಸಮೀಪದಲ್ಲಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಬಿದ್ದಿದ್ದು, ಚಾಲಕ ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಹಾಗೂ ನೆಲ್ಯಾಡಿ ಹೊರಠಾಣೆಯ ಪೋಲೀಸರು, ಅಗ್ನಿಶಾಮಕ ದಳದವರು, ಗ್ಯಾಸ್ ತುರ್ತುಸ್ಥಿತಿ ನಿವಾರಣೆ ವಾಹನ ಆಗಮಿಸಿದ್ದು ತೆರವು ಕಾರ್ಯಚರಣೆ ನಡೆಯುತ್ತಿದೆ.