ಕಡಬ: ಹತ್ತನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ



(ನ್ಯೂಸ್ ಕಡಬ) newskadaba.com ಕಡಬ, ಮೇ.21. ಹತ್ತನೇ ತರಗತಿಯ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕೊಂಬಾರು ಎಂಬಲ್ಲಿ ಗುರುವಾರದಂದು ನಡೆದಿದೆ.





ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕೊಂಬಾರುಗದ್ದೆ ನಿವಾಸಿ ತಿಮ್ಮಪ್ಪ ಗೌಡ ಎಂಬವರ ಪುತ್ರ ನಂದನ್(16) ಎಂದು ಗುರುತಿಸಲಾಗಿದೆ. ನಂದನ್ ಹತ್ತನೆ ತರಗತಿಯಲ್ಲಿ ಓದುತ್ತಿದ್ದು ಗುರುವಾರ ಮುಂಜಾನೆ ತನ್ನ ಮನೆಯ ಸಮೀಪದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಮೃತದೇಹದ ಮರಣೋತ್ತರ ಪರೀಕ್ಷೆ ಯನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಸಲಾಗಿದೆ.






error: Content is protected !!
Scroll to Top