(ನ್ಯೂಸ್ ಕಡಬ)newskadaba.com ಮಂಗಳೂರು, ಮೇ, 25. ಕೊರೊನಾಗೆ ದಕ್ಷಿಣ ಕನ್ನಡದಲ್ಲಿ ಮತ್ತೊಂದು ಬಲಿಯಾಗಿದ್ದು, ವೇಣೂರಿನ ವ್ಯಕ್ತಿ ಕೊರೋನಾ ವೈರಸ್‌ನಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಬೆಳ್ತಂಗಡಿ ತಾಲೂಕಿನ ವೇಣೂರು ಮೂಡುಕೋಡಿ ಪರಿಸರದ ವ್ಯಕ್ತಿಯಾದ ಇವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತಪಟ್ಟ ವ್ಯಕ್ತಿಯ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಇವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ.