ಉದ್ಯಾವರ ಸೇತುವೆಗೆ ಕೆಎಸ್ ಆರ್ ಟಿಸಿ ಡಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು..!!!

(ನ್ಯೂಸ್ ಕಡಬ) newskadaba.com ಉಡುಪಿ, ಮೇ.29., ಕೆ.ಎಸ್‍ಆರ್. ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಉದ್ಯಾವರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶುಕ್ರವಾರ ನಡೆದಿದೆ.

ಮಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಕೆ.ಎಸ್‍ಆರ್. ಟಿಸಿ ಬಸ್ಸು ಚಾಲಕನ ನಿಯತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಈ ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಉಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸದ್ಯ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದೆ.

error: Content is protected !!

Join the Group

Join WhatsApp Group