ಛತ್ತೀಸ್‌ಗಢ ಪ್ರಥಮ ಮುಖ್ಯಮಂತ್ರಿ ಅಜಿತ್ ಜೋಗಿ ನಿಧನ

ರಾಯಪುರ್, ಮೇ 29: ಛತ್ತೀಸ್‌ಗಢದ ಪ್ರಥಮ ಮುಖ್ಯಮಂತ್ರಿಯಾಗಿದ್ದ ಅಜಿತ್ ಜೋಗಿ (74) ದೀರ್ಘ ಕಾಲದ ಅನಾರೋಗ್ಯದಿಂದ ಶುಕ್ರವಾರ ಸಂಜೆ 3:30ಕ್ಕೆ ರಾಯಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇಂದು ಅವರಿಗೆ ಎರಡು ಬಾರಿ ಹೃದಯಾಘಾತವಾಗಿದ್ದು, ಕೂಡಲೇ ರಾಯಪುರ್‌ದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಮೊದಲೇ ಅಜಿತ್ ಜೋಗಿ ಅನಾರೋಗ್ಯಕ್ಕೊಳಗಾಗಿದ್ದು, ವಿಶ್ರಾಂತಿ ಪಡೆಯುತ್ತಿದ್ದರು. ಅಜಿತ್ ಜೋಗಿ ಅವರ ನಿಧನಕ್ಕೆ ರಾಜಕೀಯ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. ಛತ್ತೀಸ್‌ಗಢ ಅಸ್ತಿತ್ವಕ್ಕೆ ಬಂದ ನಂತರ ನವೆಂಬರ್ 2000 ರಿಂದ 2003 ನವೆಂಬರ್ ವರೆಗೆ ಕಾಂಗ್ರೆಸ್ ಸರಕಾರದ ಮೊದಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

Also Read   ಬಾಲ್ಯವಿವಾಹ ಬಂಧನ ವಿನಾಶಕ್ಕೆ ದಾರಿ ➤ಅಸ್ಸಾಂ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ

error: Content is protected !!
Scroll to Top