ಮಹಾಮಾರಿಗೆ 265 ಮಂದಿ ಬಲಿ ➤ ಭಾರತದಲ್ಲಿ ಒಂದೇ ದಿನ 7,964 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ 30:ಕೊರೋನಾ ರೌದ್ರಅವತಾರಕ್ಕೆ ಇಡೀ ದೇಶವೇ ತತ್ತರಿಸಿ ಹೋಗಿದೆ. ದಿನದಿಂದ ದಿನಕ್ಕೆ ಕೋವಿಡ್ 19ಗೆ ಜನ ಬಲಿಯಾಗುತ್ತಿದ್ದಾರೆ. ಹೀಗಿರುವಾಗ, ಭಾರತದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಹೊಸದಾಗಿ ಮತ್ತೆ 7,964 ಮಂದಿಗೆ ಕೊರೊನಾ ವೈರಸ್ ಸೋಂಕು ದೃಡವಾಗಿದೆ. 265 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

 

 

ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 265 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ ಈ ಮೂಲಕ ಭಾರತದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 4,971 ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 7,964 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,73,763 ಕ್ಕೆ ಏರಿಕೆಯಾಗಿದೆ. ಈ ಪೈಕಿ 82,370 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 86,422 ಸಕ್ರಿಯ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Also Read  ಭಾರತೀಯ ಹಜ್ ಯಾತ್ರಿಕರಿಗೆ ನಿರಾಸೆ ➤ ಈ ಬಾರಿ ಸೌದಿ ಅರೇಬಿಯಾ ನಿವಾಸಿಗಳಿಗೆ ಮಾತ್ರ ಅವಕಾಶ

 

 

 

 

error: Content is protected !!
Scroll to Top