(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.30., ಕೊರೊನಾ ಹಿನ್ನಲೆಯಲ್ಲಿ ಪ್ರತಿ ಭಾನುವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡಬೇಕೆಂದು ಮುಖ್ಯಮಂತ್ರಿ ಬಿಎಸ್ ವೈ ಆದೇಶಿಸಿದ್ದರು. ಆದರೆ ಇದೀಗ ಸಾರ್ವಜನಿಕರ ಒತ್ತಾಯ ಮೇರೆಗೆ ಹಾಗೂ ರಾಜ್ಯದ ಜನತೆಯ ಹಿತದೃಷ್ಟಿಯಿಂದ ಮೇ 31 ಭಾನುವಾರದ ಸಂಪೂರ್ಣ ಲಾಕ್ಡೌನ್ ಇರುವುದಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಪ್ರತಿ ದಿನದಂತೆ ಭಾನುವಾರವೂ ವಾಹನ ಸಂಚಾರ ಮಾಡಲಿದೆ. ಹೊಟೇಲ್, ಸೆಲೂನ್, ತರಕಾರಿ, ದಿನಸಿ ಅಂಗಡಿಗಳು, ಮದ್ಯದಂಗಡಿಗಳು ತೆರೆದಿರುತ್ತದೆ.
ಎಂದಿನಂತೆ ರಾತ್ರಿ 7 ಗಂಟೆಯಿಂದ ಬೆಳಿಗ್ಗೆ 7 ಗಂಟೆವರೆಗಿನ ಕಫ್ರ್ಯೂ ಮಾತ್ರ ಮುಂದುವರಿಯಲಿದೆ.