ಮುಂದಿನ 4 ದಿನ ಗುಡುಗು ಸಹಿತ ಮಳೆ ➤ ರಾಜ್ಯದ 8 ಜಿಲ್ಲೆಗಳಲ್ಲಿ ಎಲ್ಲೊ ಅಲರ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.31: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೇ 31 ಮತ್ತು ಜೂನ್ 1ರಂದು ವೇಗವಾಗಿ ಗಾಳಿ ಬೀಸಲಿದ್ದು, ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಜೂ.1ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

 

ಉತ್ತರ ಒಳನಾಡಿನಲ್ಲಿ ಜೂ.2 ರಂದು ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 29 ಹಾಗೂ 30 ರಂದೂ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ”ಯೆಲ್ಲೊ ಅಲರ್ಟ್” ಘೋಷಣೆ ಮಾಡಲಾಗಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ದೊರೆತಿದ್ದು, ಜೂನ್ 1 ಕ್ಕೆ ಮುಂಗಾರು ಕೇರಳವನ್ನು ಪ್ರವೇಶಿಸಲಿರುವುದಾಗಿ ತಿಳಿದುಬಂದಿದೆ. ಉತ್ತಮ ಮುಂಗಾರು ನಿರೀಕ್ಷಿಸಲಾಗಿದೆ.

 

Scroll to Top