ಪುತ್ತೂರಿನಿಂದ ಮಂಗಳೂರಿಗೆ ಖಾಸಗಿ ಬಸ್ಸು ಓಡಾಟ ಆರಂಭ…!!!

(ನ್ಯೂಸ್ ಕಡಬ) newskadaba.com ಪುತ್ತೂರು, ಜೂನ್.01,. ಕೊರೊನಾ ಲಾಕ್‍ಡೌನ್ ನಿಂದಾಗಿ ಸುಮಾರು ಎರಡು ತಿಂಗಳಿಂದ ಜಿಲ್ಲೆಯಲ್ಲಿ ಸ್ಥಬ್ಧಗೊಂಡಿದ್ದ ಖಾಸಗಿ ಬಸ್‍ಗಳ ಓಡಾಟ ಜೂನ್ 1 ರಿಂದ ಆರಂಭ ಗೊಂಡಿದೆ.

ಬೆಳಿಗ್ಗೆ 6 ಗಂಟೆಯಿಂದ ಪುತ್ತೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ಓಡಾಟ ಆರಂಭಗೊಂಡಿದ್ದು, ಪ್ರಯಾಣಿಕರ ಸಂಖ್ಯೆ ವಿರಳವಾಗಿದೆ.

ಸರ್ಕಾರದ ಮಾರ್ಗಸೂಚಿಯಂತೆ ಬಸ್ ಮಾಲಕರು ಬಸ್ಸುಗಳನ್ನು ರಸ್ತೆಗಿಳಿಸಲು ಒಪ್ಪಿಗೆ ಸೂಚಿಸಿದ್ದವು.

ಮಂಗಳೂರಿನ ಸ್ಟೇಟ್ ಬ್ಯಾಂಕಿಗೆ ಖಾಸಗಿ ಬಸ್ಸು ಆರಂಭಗೊಂಡಿದ್ದು, ಇದೀಗ ನಾಲ್ಕೈದು ಬಸ್ ಗಳು ತೆರಳಿವೆಯಾದರೂ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು. ಬಸ್ಸಿನಲ್ಲಿ ಪ್ರಯಾಣಿಕರು, ಚಾಲಕರು ಮತ್ತು ನಿರ್ವಾಹಕರು ಮಾಸ್ಕ್ ಹಾಗೂ ಸಾನಿಟೈಸರ್ ಬಳಕೆಯನ್ನು ಕಡ್ಡಾಯ ಮಾಡಲಾಗಿತ್ತು.

error: Content is protected !!

Join the Group

Join WhatsApp Group