(ನ್ಯೂಸ್ ಕಡಬ)newskadaba.com ಕಡಬ. ಜೂ.6, ಕೊರೋನಾ ಮುಂಜಾಗೃತಾ ಕ್ರಮದ ಬಗ್ಗೆ ಮುಂದಿನ ದಿನದಲ್ಲಿ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಚರ್ಚಿಸಲು ಕಡಬ ತಹಸೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಜೂ.6ರಂದು ಕಡಬ ಅಂಬೇಡ್ಕರ್ ಭವನದಲ್ಲಿ ಅಪರಾಹ್ನ 3.30 ಕ್ಕೆ ತುರ್ತು ಸಭೆಯನ್ನು ಕರೆದಿದ್ದಾರೆ.
ಸಭೆಯಲ್ಲಿ ಪಂಚಾಯತ್ ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖಾ ಅಧಿಕಾರಿಗಳು, ಕಡಬದ ವರ್ತಕರು, ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಅತೀ ಅಗತ್ಯವಾಗಿ ಪಾಲ್ಗೊಳ್ಳಬೇಕು ಎಂದು ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.