ಕಡಬ: 162 ಮಂದಿಗೆ ಹೋಂ ಕ್ವಾರಂಟೈನ್



(ನ್ಯೂಸ್ ಕಡಬ)newskadaba.com ಕಡಬ. ಜೂ. 7, ಕಡಬದ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕಡಬದ ಬ್ಯಾಂಕೊಂದರ ಸಿಬ್ಬಂದಿಗಳು ಸೇರಿದಂತೆ ಸುಮಾರು 162 ಮಂದಿಗೆ ಹೋಂ ಕ್ವಾರಂಟೈನ್ ಮಾಡುವ ಬಗ್ಗೆ ಚರ್ಚೆ ನಡೆದಿದ್ದು, ಪಟ್ಟಿ ಬಿಡುಗಡೆ ಮಾಡಲಾಗಿದೆ.







ಕೊರೋನಾ ಪಾಸಿಟಿವ್ ಬಂದ ವ್ಯಕ್ತಿ ಭೇಟಿ ನೀಡಿದ ಕಡಬದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 22 ಮಂದಿ ಸಿಬ್ಬಂದಿಗಳು ಸೇರಿದಂತೆ ಬ್ಯಾಂಕ್ ಗೆ ಭೇಟಿ ಮಾಡಿದ 140 ಮಂದಿ ಸೇರಿ ಒಟ್ಟು 162 ಮಂದಿಯನ್ನು ಸುರಕ್ಷತಾ ದೃಷ್ಟಿಯಿಂದ ಹೋಂ ಕ್ವಾರಂಟೈನ್ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಈ ಹಿನ್ನೆಲೆಯಲ್ಲಿ ಕಡಬದ ಕೃಷಿ ಸಹಕಾರಿ ಸಂಘದಿಂದ ಪಟ್ಟಿ ಬಿಡುಗಡೆ ಮಾಡಲಾಗಿದೆ.






error: Content is protected !!
Scroll to Top