ಡ್ರೈನೇಜ್ ಸ್ವಚ್ಛಗೊಳಿಸುತ್ತಿದ್ದ ಸಂದರ್ಭ ಉಸಿರುಗಟ್ಟಿ ಇಬ್ಬರು ಮೃತ್ಯು



(ನ್ಯೂಸ್ ಕಡಬ)newskadaba.com ಬೆಂಗಳೂರು. ಜೂ. 9, ಡ್ರೈನೇಜ್ ಸ್ವಚ್ಛಗೊಳಿಸುತ್ತಿದ್ದ ಸಂದರ್ಭದಲ್ಲಿ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.





ಆನೇಕಲ್ ತಾಲೂಕಿನ ತಿರುಮಗೊಂಡನಹಳ್ಳಿ ಬಳಿಯ ಪಲೋಮಾ ಎಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಜೇಮ್ಸ್(26 ವರ್ಷ) ಮತ್ತು ಆನಂದ(32 ವರ್ಷ) ಎಂದು ಗುರುತಿಸಲಾಗಿದೆ. ಇವರ ಪೈಕಿ ಜೇಮ್ಸ್ ತಮಿಳುನಾಡಿನ ಹೊಸೂರು ಮೂಲದವರಾಗಿದ್ದು, ಇವರು ಸೆಪ್ಟಿಕ್ ಟ್ಯಾಂಕ್ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದರು ಹಾಗೆಯೇ ಆನಂದ್ ಆನೇಕಲ್ ತಾಲೂಕಿನ ಮಂಚನಹಳ್ಳಿ ನಿವಾಸಿಯಾಗಿದ್ದು, ಪಲೋಮಾ ಕಂಪನಿಯ ಉದ್ಯೋಗಿ ಎನ್ನಲಾಗಿದೆ.






ಡ್ರೈನೇಜ್ ಸ್ವಚ್ಛಗೊಳಿಸಲು ಮುಂದಾದ ಮೂವರು ಸೆಪ್ಟಿಕ್ ಟ್ಯಾಂಕಿನಲ್ಲಿ ಬಿದ್ದಿದ್ದು, ಒಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಆನಂದ ಹಾಗೂ ಜೇಮ್ಸ್​ರನ್ನು ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆನ್ನಲಾಗಿದೆ.

error: Content is protected !!
Scroll to Top