(ನ್ಯೂಸ್ ಕಡಬ) newskadaba.com ಉಡುಪಿ,ಜೂ.8: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಸಚಿವರಾದ ಶ್ರೀರಾಮುಲು ಇಂದು ಉಡುಪಿಗೆ ಅಗಮಿಸಿ ತುರ್ತು ಸಭೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಜನಪ್ರತಿನಿಧಿಗಳು ,ಆರೋಗ್ಯಾಧಿಕಾರಿಗಳು ಮತ್ತು ಅಧಿಕಾರಿಗಳು ಪಾಲ್ಗೊಂಡಿದ್ದರು.ಸಭೆಯಲ್ಲಿ ಜಿಲ್ಲೆಯಲ್ಲಿ ಕೊರೋನಾ ಸ್ಥಿತಿಗತಿ ,ಅನುಸರಿಸಬೇಕಾದ ಕ್ರಮಗಳ ಕುರಿತು ಪರಾಮರ್ಶೆ ನಡೆಸಲಾಯಿತು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ದಿಂದ ಬಂದವರಿಗೆ ಇನ್ಮುಂದೆ ಸಾಂಸ್ಥಿಕ ಕ್ವಾರಂಟೈನ್ ಇರೋದಿಲ್ಲ ಹೋಂ ಕ್ವಾರಂಟೈನ್ ಮಾತ್ರ ಇರುತ್ತೆ.ಈ ಸಮಯದಲ್ಲಿ ವ್ಯಕ್ತಿಯ ಮನೆಯನ್ನು ಸಂಪೂರ್ಣ ಸೀಲ್ ಡೌನ್ ಮಾಡುತ್ತೇವೆ. ಸೀಲ್ ಮಾಡಿದ ಮೇಲೆ ಆತ ಮನೆಯಲ್ಲೇ ಇರಬೇಕು ಒಂದು ವೇಳೆ ಮನೆಯಿಂದ ಹೊರಬಂದ್ರೆ ಕ್ರಮಿನಲ್ ಕೇಸ್ ಹಾಕುವ ತೀರ್ಮಾನ ಮಾಡಿದ್ದೇವೆ ಮತ್ತು ಈ ತೀರ್ಮಾನ ರಾಜ್ಯ ಮಟ್ಟದಲ್ಲೇ ತೆಗೆದುಕೊಂಡಿದ್ದೇವೆ ಎಂದು ಹೇಳಿದರು.ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗೆ ಜಿಲ್ಲೆಯ ಸಂಪೂರ್ಣ ಅಧಿಕಾರ ಕೊಡಲಾಗಿದೆ. ಪೊಲೀಸ್, ಹೋಂ ಗಾರ್ಡ್ ಗಳನ್ನು ಕರ್ತವ್ಯಕ್ಕೆ ನೇಮಿಸುತ್ತೇವೆ. ಆಶಾ, ಅಂಗನವಾಡಿ ಕಾರ್ಯಕರ್ತರಿಂದ ಅವರ ಮೇಲೆ ನಿಗಾ ಇರಿಸಲಾಗುತ್ತಿದೆ. ಒಂದು ವೇಳೆ ಆಚೆ ಹೊರಬಂದ್ರೆ ಸುತ್ತಮುತ್ತಲ ಮನೆಯವರು ಮಾಹಿತಿಕೊಡಬೇಕು ಎಂದು ಮನವಿ ಮಾಡಿದರು. ಇವರಲ್ಲಿ ತುಂಬಾ ಬಡವರಿದ್ದರೆ, ದೇವಸ್ಥಾನದ ಮೂಲಕ ಆ ಮನೆಗೆ ಕಿಟ್ ವಿತರಣೆ ಮಾಡಲಾಗುವುದು.ರೋಗ ಲಕ್ಷಣ ಕಂಡು ಬಂದರೆ ಟೆಸ್ಟ್ ಮಾಡುತ್ತೇವೆ ಆದರೆ ಅಪಾರ್ಟ್ ಮೆಂಟ್ ಸೀಲ್ ಮಾಡಲ್ಲ ಕೇವಲ ಅವರು ಉಳಕೊಂಡ ಒಂದು ಮನೆಯನ್ನು ಮಾತ್ರ ಸೀಲ್ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.