ಮಾಣಿ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ



(ನ್ಯೂಸ್ ಕಡಬ)newskadaba.com ವಿಟ್ಲ. ಜೂ.13, ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ‌ ಪಳಿಕೆ‌ ಎಂಬಲ್ಲಿನ ಮರದ ಬುಡದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಮರದಲ್ಲಿ ಪ್ಯಾಂಟು ನೇತಾಡುತ್ತಿದ್ದು, ಪ್ಯಾಂಟಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ. ಸ್ಥಳಕ್ಕೆ ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿಯವರ ‌ನೇತೃತ್ವದ ಪೊಲೀಸರ ತಂಡ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ‌.





ಮೃತನ ಹೆಸರು ಹಾಗೂ ವಿಳಾಸ ಪತ್ತೆಯಾಗದ‌ ಹಿನ್ನೆಲೆಯಲ್ಲಿ ಈ ವ್ಯಕ್ತಿಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದರೆ ವಿಟ್ಲ ಪೊಲೀಸ್ ಠಾಣೆಗೆ ಅಥವಾ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಠಾಣೆಯ ಪ್ರಕಟಣೆ ತಿಳಿಸಿದೆ.






error: Content is protected !!
Scroll to Top