ಬೆಳ್ತಂಗಡಿಯ ಶಾಲೆಯೊಂದು ಇನ್ನೂ 1 ವರ್ಷ ಸಂಪೂರ್ಣ ಬಂದ್

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜೂ.13:ಕೊರೊನಾ ಆರ್ಭಟದಿಂದಾಗಿ ಮಕ್ಕಳ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಇಡೀ ರಾಜ್ಯದಲ್ಲಿ ಚರ್ಚೆಗಳು ನಡೆಯುತ್ತಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾಸಂಸ್ಥೆಯೊಂದು 1 ವರ್ಷ ಶಾಲೆ ಸಂಪೂರ್ಣ ಬಂದ್ ಮಾಡಲು ನಿರ್ಧರಿಸಿದೆ.


ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಶ್ರೀ ಆತ್ಮಾನಂದ ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾಲಯ ಈ ಮಹತ್ವದ ನಿರ್ಧಾರ ಕೈಗೊಂಡಿರುವುದು. ಧರ್ಮಸ್ಥಳದ ಸಮೀಪ ಇರುವ ಕನ್ಯಾಡಿಯ ಈ ಶಾಲೆಯಲ್ಲಿ ಸುಮಾರು 350 ಕ್ಕೂ ಹೆಚ್ಚು ಮಕ್ಕಳು ವಿಧ್ಯಾಭ್ಯಾಸ ಮಾಡುತ್ತಿದ್ದಾರೆ. 350 ಮಕ್ಕಳ ಪೈಕಿ 250ರಷ್ಟು ಮಕ್ಕಳು 12ವರ್ಷದೊಳಗಿನವರಾಗಿದ್ದಾರೆ. ಹೀಗಾಗಿ ಮಕ್ಕಳ ಪೋಷಕರ ಅಭಿಪ್ರಾಯ ಪಡೆದು ಶಾಲಾ ಆಡಳಿತ ಮಂಡಳಿ ಈ ನಿರ್ಧಾರ ಕೈಗೊಂಡಿದೆ.

Also Read  ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖಾವತಿಯಿಂದ ➤ ವಿಶೇಷ ಆರೋಗ್ಯ ತಪಾಸಣಾ ಶಿಬಿರ


ಪೋಷಕರು ಬೇರೆ ಶಾಲೆಗೆ ಸೇರಲು ಇಚ್ಚಿಸಿದರೆ ವರ್ಗಾವಣೆ ಪತ್ರ ನೀಡುತ್ತೇವೆ, ಶಾಲೆಯ ಈ ನಿರ್ಧಾರದ ಬಗ್ಗೆ ಶಿಕ್ಷಣ ಸಚಿವರಿಗೆ, ಶಿಕ್ಷಣ ಇಲಾಖೆಗೆ ಮಾಹಿತಿ ನೀಡಿದ್ದೇವೆ ಎಂದು ಬ್ರಹ್ಮಾನಂದ ಸ್ವಾಮೀಜಿ ತಿಳಿಸಿದ್ದಾರೆ.

error: Content is protected !!
Scroll to Top