ದ.ಕ. ಜಿಲ್ಲೆಗೆ ಕೊರೋನಾಘಾತ: ಇಂದು 79 ಮಂದಿಗೆ ಸೋಂಕು

ಮಂಗಳೂರು, ಜೂ.16: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ದಾಖಲೆ ಸಂಖ್ಯೆಯಲ್ಲಿ ಕೊರೋನ ಸೋಂಕಿತರು ಪತ್ತೆಯಾಗಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಬರೋಬ್ಬರಿ 79 ಮಂದಿಯಲ್ಲಿ ಮಹಾಮಾರಿ ಪತ್ತೆಯಾಗಿದ್ದು, ಅವರನ್ನು ಕ್ವಾರಂಟೈನ್ ಕೇಂದ್ರದಿಂದ ಕೋವಿಡ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೆಲವು ದಿನಗಳ ಹಿಂದೆ ಸೌದಿಯಿಂದ ಮರಳಿದ್ದ 74 ಮಂದಿ ಹಾಗೂ ಮಹಾರಾಷ್ಟ್ರದಿಂದ ಮರಳಿದ್ದ ಐವರಲ್ಲಿ ಸೋಂಕು ಪತ್ತೆಯಾಗಿದ್ದು, ಇದು ಜಿಲ್ಲೆಯಲ್ಲಿ ಪತ್ತೆಯಾಗಿರುವ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ಒಂದೇ ದಿನದ ದಾಖಲೆಯಾಗಿದೆ.

error: Content is protected !!

Join the Group

Join WhatsApp Group