(ನ್ಯೂಸ್ ಕಡಬ)newskadaba.com ಮಂಗಳೂರು, ಜೂ 19, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ವೈರಸ್ ಮತ್ತೆ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ಇದೀಗ ರಾಜ್ಯದ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆಗೊಂಡಿದೆ.
ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 13, ಉಡುಪಿಯಲ್ಲಿ 11 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಅದೇ ರೀತಿ ಕರ್ನಾಟಕದಲ್ಲಿ ಒಂದೇ ದಿನ 210 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು 7944 ಕ್ಕೆ ಏರಿಕೆಯಾಗಿದೆ. ಒಂದೇ ದಿನ ಬರೋಬ್ಬರಿ 230 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 5210 ಗುಣಮುಖರಾಗಿದ್ದಾರೆ. ಇಂದು 10 ಮಂದಿ ಕೋವಿಡ್-19 ಗೆ ಬಲಿಯಾಗಿದ್ದಾರೆ. ಇದುವರೆಗೆ ಒಟ್ಟು 124 ಸೋಂಕಿತರು ಸಾವಿಗೀಡಾಗಿದ್ದು, ಇಂದು ಪತ್ತೆಯಾದ 337 ಹೊಸ ಪ್ರಕರಣಗಳಲ್ಲಿ 93 ಜನ ಅಂತಾರಾಜ್ಯ ಪ್ರಯಾಣಿಕರು ಹಾಗೂ 11 ಅಂತರ ರಾಷ್ಟೀಯ ಪ್ರಯಾಣಿಕರು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.