10ನೇ ತರಗತಿ ಪರೀಕ್ಷೆ ಮಹತ್ವದ ನಿರ್ಧಾರ ತೆಗೆದುಕೊಂಡ ಆಂಧ್ರ ಸರ್ಕಾರ

(ನ್ಯೂಸ್ ಕಡಬ) newskadaba.com.ಆಂಧ್ರಪ್ರದೇಶ,ಜೂ.21:ಕೊರೊನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.ಕೊರೊನಾದಿಂದಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಎಲ್ಲಾ ರಾಜ್ಯಗಳು ತಾತ್ಕಾಲಿಕವಾಗಿ ಮುಂದೂಡಿದ್ದವು. ಈಗ ಆಂಧ್ರಪ್ರದೇಶದ ಜಗನ್‍ಮೋಹನ್ ರೆಡ್ಡಿ ಸರ್ಕಾರ 10ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿದೆ.


ಈ ಸಂಬಂಧ ಸ್ಪಷ್ಟೀಕರಣ ನೀಡಿರುವ ಆಂಧ್ರಪ್ರದೇಶದ ಶಿಕ್ಷಣ ಸಚಿವ ಆದಿಮುಲಾಪು ಸುರೇಶ್, ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತ ಬಂದಿದೆ. ಹೀಗಾಗಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನೇ ರದ್ದು ಮಾಡಿದ್ದು ಎಲ್ಲಾ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.ಆಂಧ್ರ ಪ್ರದೇಶದಲ್ಲಿ ಈವರೆಗೆ ಒಟ್ಟು 7961 ಜನರಿಗೆ ಕೊರೊನಾ ವಕ್ಕರಿಸಿದೆ.96 ಜನ ಮೃತ ಪಟ್ಟಿದ್ದಾರೆ.3948 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

Also Read  ಕಡಬ: ವಾರಿಸುದಾರರಿಲ್ಲದ ದಲಿತ ಕುಟುಂಬದ ಭೂಮಿ ಅತಿಕ್ರಮಣ ಆರೋಪ - ದಲಿತ ಹಾಗೂ ಹಿಂದೂ ಪರ ಸಂಘಟನಾ ಸದಸ್ಯರ ಜಮಾವಣೆ - ಅಧಿಕಾರಿಗಳಿಗೆ ದೂರು

error: Content is protected !!
Scroll to Top