ಮಂಗಳೂರು ಚಲೋ ಬೈಕ್ ರ್ಯಾಲಿ ► ಹೆಲ್ಮೆಟ್ ಧರಿಸದೆ ವಿವಾದಕ್ಕೆ ಗುರಿಯಾದ ಬಿಜೆಪಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.05, ಬಿಜೆಪಿ ಕಾರ್ಯಕರ್ತರು ಮಂಗಳೂರು ಚಲೋ ಬೈಕ್ ರ್ಯಾಲಿಯನ್ನು ಸೋಮವಾರ ಹಮ್ಮಿಕೊಂಡಿದ್ದು, ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಕಾನೂನು, ನಿಯಮಗಳನ್ನು ಉಲ್ಲಂಘಿಸಿ ಹೆಲ್ಮೆಟ್ ಧರಿಸದೆ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ಈಗಾಗಲೇ ಬೈಕ್’ನಲ್ಲಿ ಪ್ರಯಾಣಿಸುವ ಇಬ್ಬರೂ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕೆಂಬ ಕಾನೂನು ಜಾರಿಗೊಳಿಸಲಾಗಿದೆ.  ಎಲ್ಲಾ ಬೆಳವಣಿಗೆಗಳ ನಡುವೆ ಬಿಜೆಪಿ ಕಾರ್ಯಕರ್ತರು ಹೆಲಮೆಟ್ ಧರಿಸದೆ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ.

ರ್ಯಾಲಿ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಇನ್ನು ಹಲವವಾರು ಕಡೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

error: Content is protected !!
Scroll to Top