ವಿಧಾನ ಪರಿಷತ್‌ಗೆ ಎಲ್ಲ ಏಳು ಅಭ್ಯರ್ಥಿಗಳು ಅವಿರೋಧ ಆಯ್ಕೆ

ಬೆಂಗಳೂರು, ಜೂ.22: ವಿಧಾನ ಪರಿಷತ್‌ಗೆ ನಾಮಪತ್ರ ಅಂಗೀಕಾರವಾದ ಏಳು ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಬಿಜೆಪಿ ಪಕ್ಷದಿಂದ ನಾಲ್ವರು, ಕಾಂಗ್ರೆಸ್ ಪಕ್ಷದ ಇಬ್ಬರು, ಜೆಡಿಎಸ್ ಓರ್ವ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಾಮಪತ್ರ ಸಲ್ಲಿಸಿದ್ದ ಇಬ್ಬರು ಪಕ್ಷೇತರ ಅಭ್ಯರ್ಥಿಗಳ ನಾಮಪತ್ರ ಸೂಚಕರಿಲ್ಲದ ಕಾರಣ ತಿರಸ್ಕೃತವಾಗಿದೆ. ಹೀಗಾಗಿ ಅಂಗೀಕಾರವಾದ ಏಳು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಬಿಜೆಪಿಯಿಂದ ಮಾಜಿ ಸಚಿವರಾದ ಎಂಟಿಬಿ ನಾಗರಾಜ್, ಆರ್. ಶಂಕರ್, ಮಾಜಿ ಶಾಸಕ ಸುನೀಲ್ ವಲ್ಯಾಪುರೆ ಹಾಗೂ ಪಕ್ಷದ ಮುಖಂಡ ಪ್ರತಾಪ್ ಸಿಂಹ ನಾಯಕ್, ಕಾಂಗ್ರೆಸ್ ಪಕ್ಷದಿಂದ ಬಿ.ಕೆ. ಹರಿಪ್ರಸಾದ್ ಹಾಗೂ ನಸೀರ್ ಅಹ್ಮದ್, ಜೆಡಿಎಸ್‌ನಿಂದ ಗೋವಿಂದರಾಜು ವಿಧಾನಪರಿಷತ್‌ಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Also Read  ನಾನು ಪಂಜರದ ಪಕ್ಷಿ, ಇನ್ನು ನನಗಾರು ಗತಿ, ಕೇಳ ಬಯಸುವೆ ನನ್ನ ಕಥೆಯ..? ➤ ವೈರಲ್ ಆಯಿತು ಗಣೇಶ್ ಅನಿಲ ಅವರ ವ್ಯಂಗ್ಯಭರಿತ ಕಥೆ

ಕಾಂಗ್ರೆಸ್ ನ ಬಿ.ಕೆ.ಹರಿಪ್ರಸಾದ್ ಇಂದು ಪರಿಷತ್ ಸದಸ್ಯರಾಗಿ ವಿಧಾನಸಭೆ ಕಾರ್ಯದರ್ಶಿಯವರಿಂದ ಪ್ರಮಾಣ ಪತ್ರ ಪಡೆದರು.

error: Content is protected !!
Scroll to Top