ಉಪ್ಪಿನಂಗಡಿ: ಕಮರಿಗೆ ಉರುಳಿದ ಟೆಂಪೋ



(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ.22. ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಟೆಂಪೊವೊಂದು ರಸ್ತೆ ಬದಿಯ ಕಮರಿಗೆ ಬಿದ್ದ ಘಟನೆ ಸೋಮವಾರ ಸಂಜೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ನೀರಕಟ್ಟೆ ಎಂಬಲ್ಲಿ ನಡೆದಿದೆ.







ಗುಂಡ್ಯದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಗೂಡ್ಸ್ ಟೆಂಪೋವು ನೀರಕಟ್ಟೆ ಬಳಿ ತಲುಪುತ್ತಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆಯ ಬಲ‌ಬದಿಯ ಕಮರಿಗೆ ಉರುಳಿದ್ದು, ಅದೃಷ್ಟವಶಾತ್ ಬೃಹತ್ ಹೊಂಡದ ಮೇಲೆ ನಿಂತಿದೆ.‌ ಟೆಂಪೋದಲ್ಲಿ ಇದ್ದವರು ಅಪಾಯದಿಂದ ಪಾರಾಗಿದ್ದಾರೆ.






error: Content is protected !!
Scroll to Top