ಐಪಿಎಸ್ ಅಧಿಕಾರಿಗೂ ವಕ್ಕರಿಸಿದ ಕೊರೋನಾ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.24, ಕೊರೋನಾ ವೈರಸ್ ಮಹಾಮಾರಿ ಇದೀಗ ವಾರಿಯರ್ಸ್ ನ್ನು ಬೆಂಬಿಡದೆ ಕಾಡುತ್ತಿದೆ. ಇದೀಗ ರಾಜ್ಯದಲ್ಲಿ ಐಪಿಎಸ್ ಅಧಿಕಾರಿಯೋರ್ವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಕೆಎಸ್ಆರ್ ಪಿ ಕಮಾಂಡೆಂಟ್ ಗೆ ಕೊರೋನಾ ಸೋಂಕು ದೃಢಪಟ್ಟಿರುವುದನ್ನು ಹಿರಿಯ ಪೊಲೀಸ್ ಅಧಿಕಾರಿಗಳೇ ಖಚಿತ ಪಡಿಸಿದ್ದಾರೆ. ಕೆಎಸ್ಆರ್ ಪಿಯಲ್ಲಿ ಹಲವು ಪೊಲೀಸ್ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಪೊಲೀಸ್ ಸಿಬ್ಬಂದಿಗಳಿಗೆ ಸೋಂಕು ದೃಢಪಡುವ ಮುನ್ನ ಹಾಗೂ ನಂತರದಲ್ಲಿ ಅವರಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬುವ ಕಾರ್ಯವನ್ನು ಅವರು ಮಾಡಿದ್ದರು. ಈ ಹಿನ್ನೆಲೆಯಲ್ಲಿಯೇ ಇದೀಗ ಕೊರೋನ ಸೋಂಕು ಬಂದಿರುವ ಸಾಧ್ಯತೆಯಿದೆ.

Also Read  ಕಡಬ: ಲೋಕಾಯುಕ್ತ ಪೊಲೀಸರಿಂದ ದಾಳಿ - ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲೋಕಾಯುಕ್ತ ಬಲೆಗೆ

ಕೊರೋನ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ  ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಇನ್ನು ಅವರ ಸಂಪರ್ಕದಲ್ಲಿರುವವರನ್ನೂ ಕೂಡಾ ಪತ್ತೆ ಹಚ್ಚಿ ಕ್ವಾರಂಟೈನ್ ಗೆ ಒಳಪಡಿಸುವ ಕಾರ್ಯವನ್ನೂ ಆರೋಗ್ಯಾಧಿಕಾರಿಗಳು ಮಾಡುತ್ತಿದ್ದಾರೆ.

error: Content is protected !!
Scroll to Top