ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು ➤ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತ್ಯು



(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಜೂ.27, ಚಾಲಕನ ಅತೀ ವೇಗದ ಚಾಲನೆಯ ಕಾರಣದಿಂದ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರಣ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಕರ್ತಿಕೆರೆ ಗ್ರಾಮದ ಬಳಿ ತಡರಾತ್ರಿ ನಡೆದಿದೆ.





ಬೆಂಗಳೂರು ಮೂಲದ ಮಂಜುನಾಥ್ (30), ಮುತ್ತು ರಾಜ್ (28) ಮೃತ ದುರ್ದೈವಿಗಳು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕ್ಕಮಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು ಮೂಲದ ಐವರು ಜೊತೆಯಾಗಿ ಕಾರಿನಲ್ಲಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಅತಿಯಾದ ವೇಗದಿಂದ ಚಾಲನೆ ಮಾಡುತ್ತಿದ್ದ ಕಾರಣ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಮಗುಚಿ ಬಿದ್ದಿದೆ ಎನ್ನಲಾಗಿದೆ.






error: Content is protected !!
Scroll to Top