ವೆನ್ಲಾಕ್ ಭರ್ತಿಯಾದರೆ ಖಾಸಗಿಗೆ ಶಿಫ್ಟ್ ➤ ಸಂಸದ ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.30: ಜಿಲ್ಲೆಯಲ್ಲಿ ಕರೊನಾ ರೋಗಿಗಳ ಸಂಖ್ಯೆ ಏರಿಕೆಯಲ್ಲಿರುವುದರಿಂದ ವೆನ್ಲಾಕ್ ಸಾಮರ್ಥ್ಯ ಮೀರುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಹೆಚ್ಚುವರಿ ಬೆಡ್‌ಗಳನ್ನು ಕಾದಿರಿಸುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ಆರೋಗ್ಯ ಇಲಾಖೆಗೆ ಸೂಚಿಸಿದರು.

 

 


ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಕೋವಿಡ್-19 ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.
ನಿವೃತ್ತಿ ಹೊಂದಿದ ಎಂಬಿಬಿಎಸ್ ಅಥವಾ ಆಯುಷ್ ವೈದ್ಯಾಧಿಕಾರಿಗಳನ್ನು ಸರ್ಕಾರದ ಮಾರ್ಗಸೂಚಿ ಅನುಸಾರ ಕರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಬಳಸಬಹುದು. ನರ್ಸಿಂಗ್ ಸಿಬ್ಬಂದಿ ಕೊರತೆಯಾದರೆ ಖಾಸಗಿ ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳ ಸೇವೆಯನ್ನು ಪಡೆಯಲು ಕ್ರಮ ಕೈಗೊಳ್ಳಬೇಕು. ಅಗತ್ಯ ಇದ್ದರೆ ಮೆಡಿಕಲ್ ಕಾಲೇಜುಗಳಿಂದ ಬಾಡಿಗೆಗೆ ಹೆಚ್ಚುವರಿ ಆಂಬುಲೆನ್ಸ್ ಪಡೆದುಕೊಳ್ಳಬೇಕು. ಖಾಸಗಿ ಆಸ್ಪತ್ರೆಗಳು ಕರೊನಾ ರೋಗಿಯ ಸ್ಥಿತಿಗತಿ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

Also Read  ಪುತ್ತೂರು: ಸ್ಕೂಟರ್ ಅಪಘಾತ- ಸವಾರ ಗಂಭೀರ

 

error: Content is protected !!
Scroll to Top