ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿ ➤ ಮೃತರ ಸಂಖ್ಯೆ 19 ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.03. ಕೊರೋನಾ ಸೋಂಕಿಗೆ ಮಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದ್ದು, ಈ ಮೂಲಕ ಕೋವಿಡ್ – 19 ಗೆ ಬಲಿಯಾದವರ ಸಂಖ್ಯೆ 19 ಕ್ಕೆ ಏರಿಕೆಯಾಗಿದೆ.

ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ 49 ವರ್ಷ ವಯಸ್ಸಿನ ವ್ಯಕ್ತಿ ಕೊರೋನಾಗೆ ಬಲಿಯಾಗಿದ್ದಾರೆ. ಕೊರೋನಾ ಸೋಂಕು ದಕ್ಷಿಣ ಕನ್ನಡದಲ್ಲಿ ದಿನೇ ದಿನೇ ಹೆಚ್ಚುತ್ತಿದ್ದು, ಜಿಲ್ಲೆಯ ಜನತೆಯನ್ನು ಆತಂಕಕ್ಕೆ ದೂಡಿದೆ.

error: Content is protected !!
Scroll to Top