(ನ್ಯೂಸ್ ಕಡಬ) newskadaba.com., ಮುಂಬೈ.ಜು.04., ಮಹಾಮಾರಿ ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸಲು ಸ್ಯಾನಿಟೈಸರ್ ಹಾಗೂ ಮಾಸ್ಕ್ ಬಳಕೆ ಕಡ್ಡಾಯ ಮಾಡಲಾಗಿದೆ. ಇದೀಗ ವ್ಯಕ್ತಿಯೊಬ್ಬರು 2.89 ಲಕ್ಷ ಬೆಲೆ ಬಾಳುವ ಮಾಸ್ಕ್ ತಯಾರಿಸಿ ಅದನ್ನು ಧರಿಸುವ ಮೂಲಕ ಸುದ್ದಿಯಾಗಿದ್ದಾರೆ.
ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್ವಾಡ್ ನಿವಾಸಿ ಶಂಕರ್ ಕುರಡೆ ಎಂಬವರು 2.89 ಲಕ್ಷ ಮೌಲ್ಯದ ಮಾಸ್ಕ್ ತಯಾರಿಸಿ, ತಾನೇ ಧರಿಸಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
ಈ ಬಗ್ಗೆ ಮಾತನಾಡಿರುವ ಶಂಕರ್, ಈ ಮಾಸ್ಕ್ ತೆಳುವಾಗಿದ್ದು, ಗಾಳಿ ಒಳಕ್ಕೆ ಹಾಗೂ ಹೊರ ಹೋಗಲೆಂದೇ ಸಣ್ಣ ಸಣ್ಣ ರಂಧ್ರಗಳನ್ನು ಮಾಡಲಾಗಿದೆ. ಹೀಗಾಗಿ ಉಸಿರಾಡಲು ಯಾವುದೇ ತೊಂದರೆಯಾಗಲ್ಲ. ಆದರೆ ಈ ಮಾಸ್ಕ್ ಎಷ್ಟು ಪರಿಣಾಮ ಬೀರುತ್ತದೆ ಎಂಬ ಬಗ್ಗೆ ನಿಖರವಾಗಿ ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.