ಮಂಗಳೂರು ಕೊರೊನಾ ರೋಗ ಲಕ್ಷಣ ಇಲ್ಲದವರಿಗೆ ಮನೆಯಲ್ಲಿಯೇ ಆರೈಕೆಗೆ ಸಿದ್ಧತೆ



(ನ್ಯೂಸ್ ಕಡಬ) newskadaba.com.ಮಂಗಳೂರು,ಜು.5: ದ.ಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಆರೈಕೆ ಮಾಡಲಾಗುತ್ತಿದೆ. ಇನ್ನೂ ಕೊರೊನಾ ರೋಗ ಲಕ್ಷಣ ಇಲ್ಲದವರಿಗೆ ಮನೆಯಲ್ಲಿಯೇ ಆರೈಕೆ ಮಾಡಲು ಸರ್ಕಾರ ತೀರ್ಮಾನಿಸಿದೆ.







ಈ ಬಗ್ಗೆ ಸೂಚನೆ ನೀಡಿರುವ ಜಿಲ್ಲಾ ಆರೋಗ್ಯಧಿಕಾರಿ, ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ತಿಳಿಸಿರುವಂತೆ ಇನ್ನು ಮುಂದಿನ ದಿನಗಳಲ್ಲಿ ರೋಗ ಲಕ್ಷಣ ರಹಿತವಾದ ರೋಗಿಗಳನ್ನು ತಮ್ಮ ತಮ್ಮ ಮನೆಯಲ್ಲೇ ಪ್ರತ್ಯೇಕವಾಗಿ ಆರೈಕೆಗೆ ವ್ಯವಸ್ಥೆ ಮಾಡಲು ಸೂಕ್ತ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ. ಹಾಗೆಯೇ ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಹಾಗೂ ನಿರ್ಬಂಧನೆಗಳನ್ನು ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.






error: Content is protected !!
Scroll to Top