ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 29ಕ್ಕೆ ಏರಿಕೆ..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು 08. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಬುಧವಾರ ಒಂದೇ ದಿನ ಮೂವರು ಮೃತಪಟ್ಟಿದ್ದು ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.


ಪುತ್ತೂರು ಮೂಲದ 32 ವರ್ಷದ ಮಹಿಳೆ, ಉಳ್ಳಾಲದ 62 ವರ್ಷದ ವೃದ್ದೆ, ಭಟ್ಕಳ ಮೂಲದ 60 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂವರು ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದು ಈ ಪೈಕಿ ಇಬ್ಬರು ಮಹಿಳೆಯರು ನಗರದ ಕೋವಿಡ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

Also Read  ಮರ್ಧಾಳ: ಪರಿಸರದ ಬಗ್ಗೆ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ


ಜಿಲ್ಲೆಯಲ್ಲಿ ಕೊರೊನಾ ಶರವೇಗದಲ್ಲಿ ವ್ಯಾಪಿಸುತ್ತಿದ್ದು ಮಂಗಳವಾರದವರೆಗೆ 1359 ಪ್ರಕರಣ ದೃಢಪಟ್ಟಿದೆ. ಈ ಪೈಕಿ 683 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇನ್ನು 650 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

error: Content is protected !!
Scroll to Top