ದಕ್ಷಿಣ ಕನ್ನಡ ಲಾಕ್ ಡೌನ್ ➤ ಜಿಲ್ಲಾಧಿಕಾರಿಗಳಿಗೆ ತಿರ್ಮಾನ ಬಿಟ್ಟ ಸಿ ಎಂ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.13: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಕೊರೋನಾ ಆತಂಕದ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಮಾಡುವಂತೆ ಮನವಿ ಮಾಡಿದ್ದು, ಲಾಕ್ ಡೌನ್ ಮಾಡುವುದಕ್ಕೆ ಅವಕಾಶ ಕೊಡಿ ಎಂದು ಮುಖ್ಯಮಂತ್ರಿಗೆ ಇಂದು ನಳೀನ್ ಕುಮಾರ್ ಕಟೀಲ್ ರವರು ವೀಡಿಯೋ ಕಾನ್ಫರೆನ್ಸ್ ನಲ್ಲಿ ಮನವಿ ಮಾಡಿದ್ದಾರೆ.  ಜಿಲ್ಲಾಡಳಿತವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸಿ ಎಂ ಬಿ ಎಸ್ ಯಡಿಯೂರಪ್ಪರವರು ಸೂಚಿಸಿದ್ದರೆ.

ವಿಡಿಯೋ ಕಾನ್ಫರೆನ್ಸ್ ನಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಜಿ.ಪಂ ಸಿ.ಇ.ಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು. ವಿಡಿಯೋ ಕಾನ್ಫರೆನ್ಸ್ ಬಳಿಕ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಿ ಜಿಲ್ಲೆಯಲ್ಲಿ ಲಾಕ್ಡೌನ್ ಕುರಿತು ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಜನಪ್ರತಿನಿಧಿಗಳು,ಅಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.

Also Read  ದಕ್ಷಿಣ ಕನ್ನಡ: 17 ಅಭ್ಯರ್ಥಿಗಳಿಂದ 18 ನಾಮಪತ್ರ ಸಲ್ಲಿಕೆ

 

error: Content is protected !!
Scroll to Top