ಉಡುಪಿಯ ಉಚ್ಚಿಲದಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿ ➤ ಓರ್ವ ಗಂಭೀರ..!



(ನ್ಯೂಸ್ ಕಡಬ) newskadaba.com ಉಚ್ಚಿಲ,ಜು.18: ಕಾರುಗಳೆರಡು ಮುಖಾಮುಖಿ ಡಿಕ್ಕಿಯಾಗಿ ಚಾಲಕನೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರಿ ಠಾಣಾ ವ್ಯಾಪ್ತಿಯ ಉಚ್ಚಿಲದಲ್ಲಿ ಸಂಭವಿಸಿದೆ.





ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳೂರು ಕಡೆಯಿಂದ ಬಂದು ಉಚ್ಚಿಲ ಪಣಿಯೂರು ಕಡೆಗೆ ಉಚ್ಚಿಲ ಪಣಿಯೂರು ಹೆದ್ದಾರಿ ಕ್ರಾಸ್ ಬಳಿ ಚಲಿಸುತ್ತಿದ್ದ ವೇಳೆ ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುತ್ತಿದ್ದ ಅಮ್ನಿ ಕಾರು ಮುಖಮುಖಿ ಡಿಕ್ಕಿಯಾಗಿದೆ. ಅಪಘಾತದ ವೇಗಕ್ಕೆ ಕಾರಿನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಕಾರುಗಳೆರಡು ನಜ್ಜುಗುಜ್ಜಾಗಿದೆ. ಗಾಯಗೊಂಡ ಚಾಲಕನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ.






 

error: Content is protected !!
Scroll to Top