ಇಂದಿನಿಂದ ದೂರದರ್ಶನ ಚಂದನ ವಾಹಿನಿಯಲ್ಲಿ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.20:  ಕೋವಿಡ್ ಸಂದರ್ಭದಲ್ಲಿ ಮಕ್ಕಳ ನಿರಂತರ ಕಲಿಕೆಗೆ ಯಾವುದೇ ಅಡಚಣೆಯುಂಟಾಗದಂತೆ ಕಲಿಕೆಯನ್ನು ಮುಂದುವರೆಸಲು, ಮಕ್ಕಳು ಮನೆಯಲ್ಲಿಯೇ ಇದ್ದರೂ ಕಲಿಕೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಲು ಇಂದಿನಿಂದ ಅಂದರೆ ಸೋಮವಾರದಿಂದ ದೂರದರ್ಶನದ ಚಂದನ ವಾಹಿನಿಯಲ್ಲಿ ಇ ಕ್ಲಾಸ್ ಕಲಿಕಾ ಕಾರ್ಯಕ್ರಮ ಆರಂಭಗೊಳ್ಳಲಿದೆ. ಇಂದಿನಿಂದ 20 ದಿನಗಳ ಅವಧಿಗೆ 8 ರಿಂದ 10ನೇ ತರಗತಿಯ ಮಕ್ಕಳಿಗೆ ಪ್ರಥಮ ಭಾಷೆ ಕನ್ನಡ, ಇಂಗ್ಲೀಷ್, ಸಂಸ್ಕೃತ, ಉರ್ದು, ದ್ವಿತೀಯ ಭಾಷೆ ಇಂಗ್ಲೀಷ್, ತೃತೀಯ ಭಾಷೆ ಹಿಂದಿ, ಕನ್ನಡ ಮಾಧ್ಯಮದಲ್ಲಿ ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ವಿಷಯಗಳಲ್ಲಿ ಸೇತುಬಂಧ ಕಾರ್ಯಕ್ರಮಗಳನ್ನು ದೂರದರ್ಶನದ ಚಂದನ ವಾಹಿನಿಯಲ್ಲಿ ಬಿತ್ತರಿಸಲಾಗುತ್ತದೆ.

 

20 ದಿನಗಳ ಈ ಸೇತುಬಂಧ ತರಗತಿಗಳ ಬಳಿಕ 8ರಿಂದ 10ನೇ ತರಗತಿಗಳಿಗೆ ಕನ್ನಡ ಮಾಧ್ಯಮದಲ್ಲಿ ದೈನಂದಿನ ಬೋಧನೆ ಮುಂದುವರೆಯಲಿವೆ.ಮುಂದಿನ ದಿನಗಳಲ್ಲಿ 1ರಿಂದ 10ನೇ ತರಗತಿಯ ಎಲ್ಲಾ ಮಕ್ಕಳಿಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ವಿಡೀಯೋ ಪಾಠಗಳನ್ನು ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ದೂರದರ್ಶನ ಚಂದನ ವಾಹಿನಿಯು ಪ್ರಸಾರ ಮಾಡಲಿದೆ.ಎಲ್ಲಾ ಪೋಷಕರು ತಮ್ಮ ಮಕ್ಕಳನ್ನು ಈ ಕಲಿಕೆಯ ಪ್ರಯೋಜನವನ್ನು ಪಡೆಯುವಲ್ಲಿ ಪ್ರೇರೆಪಿಸಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.
ಶಿಕ್ಷಣ ಇಲಾಖೆಯ ಯುಟ್ಯೂಬ್ ವಾಹಿನಿಯಲ್ಲಿಯೂ ಸಹ ಈ ಎಲ್ಲಾ ತರಗತಿಗಳು ಲಭ್ಯವಿರಲಿದ್ದು ವಿದ್ಯಾರ್ಥಿಗಳು ಇದನ್ನು ಸದುಪಯೋಗ ಮಾಡಿಕೊಳ್ಳಬಹುದಾಗಿದೆ.

Also Read  ಮಂಗಳೂರು: 27ಲಕ್ಷ ರೂ. ಮೌಲ್ಯ ಅಕ್ರಮ ಚಿನ್ನಸಾಗಾಟ ಪತ್ತೆ ➤ ಆರೋಪಿ ವಶಕ್ಕೆ

 

error: Content is protected !!
Scroll to Top