ಮುಂದಿನ ಮೂರು ದಿನವೂ ಕರ್ನಾಟಕ ರಾಜ್ಯಾದ್ಯಂತ ಮಳೆ ➤ ಹವಾಮಾನ ಮುನ್ಸೂಚನೆ



(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.20:  ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರಿಯಲಿದೆ. ಇವತ್ತೂ ಸೇರಿ ಇನ್ನೂ 4 ದಿನ ಮಳೆಯ ನರ್ತನ ಮುಂದುವರಿಯಲಿದೆ. ಜುಲೈ 23ರವರೆಗೂ ಐಎಂಡಿಬಿಯ ಹವಾಮಾನ ಮುನ್ಸೂಚನೆಯ ಪ್ರಕಾರ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ.





ಹಲವು ದಿನಗಳಿಂದಲೂ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದೆ. ಇಲ್ಲಿ ಮುಂದಿನ ಮೂರು ದಿನಗಳೂ ಭರ್ಜರಿ ಮಳೆ ಮುಂದುವರಿಯಲಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಕೋಲಾರ ಜಿಲ್ಲೆಗಳಲ್ಲಿ ಇವತ್ತು ದೊಡ್ಡ ಪ್ರಮಾಣದಲ್ಲಿ ಮಳೆಯಾಗಲಿದೆ. ಮುಂದಿನ ಮೂರು ದಿನ ಇಲ್ಲಿ ಮಧ್ಯಮ ಪ್ರಮಾಣದಲ್ಲಿ ಮಳೆ ಮುಂದುವರಿಯಲಿದೆ.






error: Content is protected !!
Scroll to Top