ಗರ್ಭಿಣಿಯರ ಚಿಕಿತ್ಸೆ ನೀಡದಿದ್ದರೆ ಕಠಿಣ ಕ್ರಮ ➤ ದ.ಕ ಉಸ್ತುವರಿ ಸಚಿವರಿಂದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು , ಜು.21:  ಖಾಸಗಿ ಆಸ್ಪತ್ರೆಗಳಲ್ಲಿ ಯಾವುದೇ ಸಂದರ್ಭದಲ್ಲಿ ಕೋವಿಡ್ ಸೋಂಕಿತರೆಂಬ ಕಾರಣಕ್ಕೆ ಗರ್ಭಿಣಿಯರಿಗೆ ಚಿಕಿತ್ಸೆ ನೀಡದೆ ಬೇರೆಡೆಗೆ ಕಳುಹಿಸುವಂತಿಲ್ಲ. ಹೆರಿಗೆ ವಿಚಾರದಲ್ಲಿ ಖಾಸಗೀ ಆಸ್ಪತ್ರೆಗಳು ಸತಾಯಿಸದೆ ಹೆರಿಗೆ ಮಾಡಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.

ಗರ್ಭಿಣಿಯರಿಗೆ ಖಾಸಗೀ ಆಸ್ಪತ್ರೆಗಳು ಚಿಕಿತ್ಸೆ ನೀಡಲು ಸತಾಯಿಸಿದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ವ್ಯವಸ್ಥಿತವಾಗಿ ಹೆರಿಗೆ ಮಾಡಿಸಲು ಆಯಾ ಆಸ್ಪತ್ರೆಗಳು ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು. ಇದರಲ್ಲಿ ವಿಳಂಭ ಸಹಿಸಲು ಸಾಧ್ಯವಿಲ್ಲ ಎಂದು ಅವರು ಸೋಮವಾರ ವೆನ್‍ಲಾಕ್ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದರು.  ನೆಲ್ಯಾಡಿಯ ಗರ್ಭಿಣಿಯೊಬ್ಬರು ಚಿಕಿತ್ಸೆಗಾಗಿ ದಿನಪೂರ್ತಿ ಅಲೆದಾಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಕೂಡಲೇ ಘಟನೆಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ಆದೇಶಿಸಿದರು. ಸಕಾಲಕ್ಕೆ ಮಹಿಳೆಗೆ ಚಿಕಿತ್ಸೆ ನೀಡಲು ವಿಳಂಭಿಸಿದ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದ ಸಚಿವರು, ಅಗತ್ಯ ಬಿದ್ದರೆ ಅಂತಹವರನ್ನು ಸೇವೆಯಿಂದ ಅಮಾನತು ಮಾಡಲೂ ಹಿಂಜರಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Also Read  ಮಗಳೆಂದರೆ ಅಪ್ಪನಿಗೆ ಪಂಚಪ್ರಾಣ ► ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ..!!!

error: Content is protected !!
Scroll to Top