ಉಡುಪಿ: ಪುತ್ತಿಗೆ ಮಠದ ‘ಸುಗುಣೇಂದ್ರ ತೀರ್ಥ ಶ್ರೀ’ಗಳಿಗೆ ಕೊವೀಡ್ -19 ದೃಢ

(ನ್ಯೂಸ್ ಕಡಬ) newskadaba.com ಉಡುಪಿ , ಜು.21:  ಕೃಷ್ಣ ನಗರಿಯಲ್ಲಿ ಕೊರೋನಾ ದಿನದಿಂದ ದಿನಕ್ಕೆ ಸದ್ದು ಮಾಡುತ್ತಲೇ ಇದೆ. ಇಂದು ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೂ ಕೊವೀಡ್ -19 ಸೋಂಕು ತಗುಲಿರುವುದು ದೃಢವಾಗಿದೆ. ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸುಗುಣೇಂದ್ರ ಶ್ರೀಗಳಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಅವರ ಗಂಟಲ ದ್ರವ ಪರೀಕ್ಷೆಗೆ ರವಾನಿಸಲಾಗಿತ್ತು. ಮಂಗಳವಾರ ವರದಿ ಕೈ ಸೇರಿದ್ದು, ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ಶ್ರೀಗಳನ್ನು ದಾಖಲಿಸಲಾಗಿದೆ. ಸದ್ಯ ಶ್ರೀಗಳು ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ. ಸ್ವಾಮೀಜಿಯ ಜೊತೆ ಸಂಪರ್ಕ ಹೊಂದಿದವರನ್ನ ಕ್ವಾರಂಟೈನ್‌ನಲ್ಲಿ ಇಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇನ್ನು ಸ್ವಾಮೀಜಿಗಳು ಶೀಘ್ರ ಗುಣಮುಖರಾಗುವಂತೆ ಭಕ್ತರು ಮಠದಲ್ಲಿ ವಿಶೇಷ ಪ್ರಾರ್ಥನೆ ಮಾಡುತ್ತಿದ್ದಾರೆ.

Also Read  ನಕಲಿ ಎನ್‌ ಕೌಂಟರ್‌…!      ➤  ಒಂಬತ್ತು ಪೊಲೀಸರಿಗೆ ಜೀವಾವಧಿ ಶಿಕ್ಷೆ

error: Content is protected !!