ಪುತ್ತೂರು: ಸಂಚಾರಿ ಪೊಲೀಸ್ ಠಾಣಾ ಹೆಡ್ ಕಾನ್ಸ್‌ಟೇಬಲ್ ಉಮೇಶ್ ಮುಪ್ಪೇರ್ಯ ನಿಧನ

(ನ್ಯೂಸ್ ಕಡಬ) newskadaba.com ಜು‌23, ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಪ್ಪೇರ್ಯ ಗ್ರಾಮದ ಉಮೆಶ್ (47) ಅಸೌಖ್ಯದಿಂದ ಮೃತಪಟ್ಟಿದ್ದಾರೆ.

ಅನಾರೋಗ್ಯದ ಕಾರಣದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಇಂದು ನಿಧನರಾಗಿದ್ದಾರೆ. ಇವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲೂ ತನ್ನ ಸೇವೆಯನ್ನು ಸಲ್ಲಿಸಿದ್ದಾರೆ.

Scroll to Top