(ನ್ಯೂಸ್ ಕಡಬ) newskadaba.com ಮಂಡ್ಯ : ಜು.23., ಮಂಡ್ಯ ಸಂಸದೆ, ರೆಬೆಲ್ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್ ಕೊರೋನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.
ಮೂರು ವಾರಗಳ ಕ್ವಾರಂಟೈನ್ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖಳಾಗಿದ್ದೇನೆ, ಪರೀಕ್ಷೆಯ ನಂತರ ನಾನೀಗ ಕೋವಿಡ್19 ನೆಗೆಟಿವ್ ಆಗಿದೆ, ವೈದ್ಯರ ಸಲಹೆಯಂತೆ ನಾಲ್ಕು ವಾರದ ವಿಶ್ರಾಂತಿ ಪಡೆದು, ನಿಮ್ಮೆಲ್ಲರ ಸೇವೆಗೆ ಮರಳಿ ಬರಲು ಕಾಯುತ್ತಿದ್ದೇನೆ. ” ಸಂಸದೆ ಟ್ವೀಟ್ ಮಾಡಿದ್ದಾರೆ.
ಕೋವಿಡ್ ಪಾಸಿಟಿವ್ ಆದ ಜನರು ಹೆದರುವ ಅಗತ್ಯವಿಲ್ಲ. ದಯವಿಟ್ಟು ವೈದ್ಯರು ಹೇಳುವ ಎಲ್ಲಾ ಸಲಹೆಯನ್ನೂ ಚಾಚೂ ತಪ್ಪದೆ ಪಾಲಿಸಿ, ಅನುಸರಿಸಿ. ಯಾವುದೇ ಕಾರಣಕ್ಕೂ ಧೈರ್ಯ ಕಳೆದುಕೊಳ್ಳಬೇಡಿ ಎಂದು ತಮ್ಮ ಬೆಂಬಲಿಗರಿಗೆ, ಅಭಿಮಾನಿಗಳಿಗೆ ಸುಮಲತಾ ಸಲಹೆ ನೀಡಿದ್ದಾರೆ.