ಸೋಮವಾರ ಎಲ್ಲಾ ರಾಜ್ಯದ ಸಿಎಂ ಗಳ ಜೊತೆ ಪ್ರಧಾನಿ ಮೋದಿ ಸಭೆ

(ನ್ಯೂಸ್ ಕಡಬ) newskadaba.com ನವದೆಹಲಿ: ಜು.25, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ದೇಶದ ಎಲ್ಲಾ ರಾಜ್ಯಗಳ ಸಿಎಂ ಗಳ ಜೊತೆಗೆ ಮಹತ್ವದ ಸಭೆ ನಡೆಸಲಿದ್ದು, ದೇಶದಲ್ಲಿ 3 ನೇ ಹಂತದ ಲಾಕ್ ಡೌನ್ ಸಡಿಲಿಕೆಯ ಮಾರ್ಗಸೂಚಿಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ.

ಇನ್ನು ಪ್ರಧಾನಿ ಮೋದಿ ಅವರ ವಿಡಿಯೋ ಕಾನ್ಫರೆನ್ಸ್ ನಲ್ಲಿ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ವೈರಸ್ ಸೋಂಕಿನ ಪ್ರಕರಣಗಳ ನಿಯಂತ್ರಣದ ಬಗ್ಗೆ ಮುಂದಿನ ನಿರ್ಧಾರಗಳೇನು? ಮೂರನೇ ಹಂತದ ಲಾಕ್ ಡೌನ್ ಸಡಿಲಿಕೆ ಮಾರ್ಗಸೂಚಿಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.

Also Read  ತುಳುನಾಡಿನ ಚರಿತ್ರೆಗೆ ದೊರೆತ ಮಹತ್ವದ ಮನ್ನಣೆ ➤ ಪಠ್ಯಪುಸ್ತಕವಾಗಲಿದೆ ತುಳುನಾಡಿನ ಚರಿತ್ರೆ

error: Content is protected !!
Scroll to Top