ದ. ಕ ಹಾಗೂ ಉಡುಪಿಯಲ್ಲಿ ಭಾನುವಾರ ಲಾಕ್‌ಡೌನ್‌ ಮುಂದುವರಿಯಲಿದೆ ➤ ಜಿಲ್ಲಾಧಿಕಾರಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಉಡುಪಿ: ಜು.25., ಕೊರೊನಾ ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾನುವಾರ ಲಾಕ್‌ಡೌನ್‌ ಮುಂದುವರೆಯಲಿದೆ.


ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಮತ್ತು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್‌ ಅವರು ಉಭಯ ಜಿಲ್ಲೆಗಳಲ್ಲಿ ಶನಿವಾರ ರಾತ್ರಿ 9 ಗಂಟೆಯಿಂದ ಭಾನುವಾರದ ಲಾಕ್‌ಡೌನ್‌ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.
ಕಳೆದ ಮಂಗಳವಾರ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಯೂಟ್ಯೂಬ್‌ ಹಾಗೂ ಫೇಸ್‌ಬುಕ್‌ ಲೈವ್‌ ಮೂಲಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದು ರಾಜ್ಯದಲ್ಲಿ ಇನ್ನು ಲಾಕ್‌ಡೌನ್‌ ಮಾಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

Also Read  ಮಾದಕ ದ್ರವ್ಯ ಸೇವನೆ..! ಶೇ.30 ರಷ್ಟು ಪ್ರಕರಣ ದಾಖಲು..!


ಕೊರೊನಾ ನಿಯಮಗಳನ್ನು ಪಾಲಿಸಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು, ಮನೆಯಿಂದ ಹೊರ ಬರುವ ಸಂದರ್ಭದಲ್ಲಿ ಮಾಸ್ಕ್‌ ಧರಿಸುವ ಮೂಲಕ ಈ ಕೊರೊನಾದ ನಡುವೆ ಬದುಕುವುದನ್ನು ಕಲಿಯಬೇಕು ಎಂದು ತಿಳಿಸಿದ್ದರು.

error: Content is protected !!
Scroll to Top