ಜುಲೈ 28: ಮಂಗಳೂರು ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.26, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಿರಿ, ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಿರಿ, ಕೋವಿಡೇತರ ಆರೋಗ್ಯ ಸಮಸ್ಯೆಗಳಿಗೆ ಸೂಕ್ತ ಪರ್ಯಾಯ ವ್ಯವಸ್ಥೆ ಕಲ್ಪಿಸಿರಿ, ಹೆರಿಗೆ ಸಂಬಂಧಿತ ಸಮಸ್ಯೆಗಳಿಗೆ ಪ್ರತ್ಯೇಕ ಆ್ಯಂಬುಲೆನ್ಸ್ ಒದಗಿಸಿರಿ, ಗರ್ಭಿಣಿ ಮತ್ತು ಬಾಣಂತಿಯರು ಹಾಗೂ ಮಕ್ಕಳ ಪಾಲನೆಗೆ ಅಗತ್ಯವಾದ ಮಾತ್ರಶ್ರೀ ಯೋಜನೆಯನ್ನು ಮುಂದುವರಿಸಿರಿ, ಪೌಷ್ಠಿಕ ಆಹಾರ ಪದಾರ್ಥಗಳನ್ನು ಕೇರಳ ಮಾದರಿಯಲ್ಲಿ ವಿತರಿಸಿರಿ ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಜು.28ರಂದು ಬೆಳಗ್ಗೆ 10.30ಕ್ಕೆ ಮಂಗಳೂರು ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Also Read  ಸುಳ್ಯ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಫೈಝಲ್‌ ಎಸ್ಇಎಸ್ ಆಯ್ಕೆ

error: Content is protected !!
Scroll to Top